ದೇಶ

ಕೋವಿಡ್-19: ದೇಶದಲ್ಲಿಂದು 44,489 ಕೊರೋನಾ ಕೇಸ್ ಪತ್ತೆ, 524 ಮಂದಿ ಸಾವು

ದೇಶದಲ್ಲಿ ಗುರುವಾರ 44,489 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,66,706ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 44,489 ಕೊರೋನಾ ಕೇಸ್ ಪತ್ತೆ, 524 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಗುರುವಾರ 44,489 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,66,706ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 524 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,35,223ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ಒಟ್ಟಾರೆ 92,66,706 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 36,367 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 86,79,138ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,52,344 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,90,238 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,59,31,545 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.