ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ

ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸುಕ್ಮಾ: ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಸಿಆರ್'ಪಿಎಫ್ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್ (ಕೋಬ್ರಾ) 206 ಬೆಟಾಲಿಯನ್ ಸಹಾಯಕ ಕಮಾಂಡೆಂಟ್ ನಿತಿನ್ ಭಲೇರಾವ್ ಅವರು ಸುಕ್ಮಾದ ತಾಡ್ಮೆಟ್ಲಾ ಪ್ರದೇಶದ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಈ ನಡುವೆ ಘಟನೆ ವೇಳೆ ಸ್ಥಳದಲ್ಲಿದ್ದ 9 ಮಂದಿ ಯೋಧರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಚಿಂತಲ್ ನಾರ್ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಸಿಆರ್'ಪಿಎಫ್ ಯೋಧರ ತಂಡ ಹಾಗೂ ಇಬ್ಬರು ಹಿರಿಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ತೆರಳಿದ್ದರು. ಈ ವೇಳೆ ನಕ್ಸಲರು ಐಇಡಿ ಸ್ಫೋಟಿಸಿದ್ದು, ಓರ್ವ ಅಧಿಕಾರಿ ಸಾವನ್ನಪ್ಪಿದ್ದಾರೆ. ಉಳಿದವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಗಾಯಾಗೊಂಡಿದ್ದ 10 ಮಂದಿ ಯೋಧನರ್ನು ಏರ್ ಲಿಫ್ಟ್ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com