ರಾಜಸ್ಥಾನ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕತ್ತು ಹಿಸುಕಿ ಕೊಲೆ

ಎಂಟು ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಂದಿರುವ ಘಟನೆ ರಾಜಸ್ಥಾನದ ಪ್ರತಾಪ್‌ಗಢದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜೈಪುರ: ಎಂಟು ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಂದಿರುವ ಘಟನೆ ರಾಜಸ್ಥಾನದ ಪ್ರತಾಪ್‌ಗಢದಲ್ಲಿ ನಡೆದಿದೆ.

ಬಾಲಕಿಯ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸ್‌ ಅಧಿಕಾರಿ ರವೀಂದ್ರ ಪತ್ರಾಪ್‌ ಸಿಂಗ್‌ ಅವರು ಹೇಳಿದ್ದಾರೆ. ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ಅಪ್ರಾಪ್ತೆಯನ್ನು ಆರೋಪಿಗಳು ಅಪಹರಿಸಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದಿದ್ದಾರೆ.

ಬಾಲಕಿಯ ಮನೆಯಿಂದ 300 ಮೀಟರ್ ದೂರದಲ್ಲಿರುವ ಪಾಳು ಬಾವಿಯಲ್ಲಿ ಆಕೆಯನ್ನು ಎಸೆದಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು. 

ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ  ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com