ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ನಿಜಾಮ್ ಸಂಸ್ಕೃತಿಯಿಂದ ಮುಕ್ತವಾಗಲಿದೆ: ಅಮಿತ್ ಶಾ

ಹೈದರಾಬಾದ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಜಾಮ್ ಸಂಸ್ಕೃತಿಯಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಹೈದರಾಬಾದ್: ಹೈದರಾಬಾದ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಜಾಮ್ ಸಂಸ್ಕೃತಿಯಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ನಿಮಿತ್ತ ಮುತ್ತಿನ ನಗರಿಯಲ್ಲಿ ಪ್ರಚಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಹೈದರಾಬಾದ್ ಅನ್ನುಶೀಘ್ರ ನವಾಬ್, ನಿಜಾಮ್ ಸಂಸ್ಕೃತಿಯಿಂದ ಮುಕ್ತಗೊಳಿಸಿ. ಇಲ್ಲಿ ಮಿನಿ ಭಾರತ ಸ್ಥಾಪಿಸುವುದಾಗಿ ಅವರು ಹೇಳಿದರು. ಇದೇ ವೇಳೆ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  

ರೈತರ ಪ್ರತಿಭಟನೆ ಕುರಿತು ಭಾನುವಾರ ಅಮಿತ್ ಶಾ ಹೇಳಿಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರ ಅಭಿಪ್ರಾಯಗಳಿಗೆ ತದ್ವಿರುದ್ಧವಾಗಿದೆ. ಆಂದೋಲನ ನಡೆಸುತ್ತಿರುವ ರೈತರು ಆಯೋಜಿಸಿರುವ "ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲವಿದೆ ಎಂದು ಹರಿಯಾಣ ಸಿಎಂ ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ನ ಪಂಜಾಬ್ ಘಟಕದ ಅಧ್ಯಕ್ಷ ಜಗ್ಜಿತ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಸಚಿವ ಅಮಿತ್ ಷಾ ಅವರು ಷರತ್ತಿನ ಮೇಲೆ ಆರಂಭಿಕ ಸಭೆ ಕರೆಯುವುದು ಒಳ್ಳೆಯದಲ್ಲ ಷರತ್ತು ರಹಿತ, ಮುಕ್ತ ಹೃದಯದಿಂದ ಮಾತುಕತೆಗೆ ಮುಂದಾಗಬೇಕು ಎಂದು ಆಗ್ರಹಪಡಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com