ಕೋವಿಡ್-19: ದೇಶದಲ್ಲಿಂದು 38,772 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 94 ಲಕ್ಷ
ದೇಶದಲ್ಲಿಂದು 38,772 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿಂದು 38,772 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 443 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,37,139ಕ್ಕೆ ತಲುಪಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಇದೂವರೆಗೂ ಪತ್ತೆಯಾಗಿರುವ 94 ಲಕ್ಷ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 45,333 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 88,47,600ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,46,952 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


