ರಾಹುಲ್ ಗಾಂಧಿ, ಪ್ರಿಯಾಂಕಾ ಇತರ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ  ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು  ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳೀದ್ದಾರೆ.
ರಾಹುಲ್ ಗಾಂಧಿ, ಪ್ರಿಯಾಂಕಾ ಇತರ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್
Updated on

ನೋಯಿಡಾ: ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ  ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು  ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳೀದ್ದಾರೆ.

ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188(ಸಾರ್ವಜನಿಕ ಸೇವಕರಾಗಿ ಸರಿಯಾದ ಆದೇಶ ಪಾಲನೆ ಮಾಡದಿರುವುದು),  269 (ಕಾನೂನುಬಾಹಿರವಾಗಿ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಯಾವುದೇ ರೋಗದ ಸೋಂಕನ್ನು ಹರಡುವುದು), 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಕೆಲವು ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ ಕಾರಣ ಮಹಿಳಾ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಅಲ್ಲದೆ ಓರ್ವ ಲೇಡಿ ಸಬ್ ಇನ್ಸ್‌ಪೆಕ್ಟರ್‌ನ ಸಮವಸ್ತ್ರ ಹರಿದುಹೋಗಿದೆ" ಎಂದು ಗೌತಮ್ ಬುದ್ಧ ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಮುನ್ನ ಪಕ್ಷದ ಹಿರಿಯ ನಾಯಕರು ಸೇರಿದಂತೆ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರು, ಗ್ರೇಟರ್ ನೋಯ್ಡಾದ ಎಕ್ಸ್‌ಪ್ರೆಸ್‌ವೇಗಳಲ್ಲಿ ಪ್ಯಾರಿ ಚೌಕ್ ಬಳಿ ತಮ್ಮ ಬೆಂಗಾವಲು ವಾಹನ ನಿಲ್ಲಿಸಿ  ಮೆರವಣಿಗೆ ಆರಂಭಿಸಿದ್ದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮತ್ತು ಸುಮಾರು 150 ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಈ ಸಮಯ ಕ್ಷಿಪ್ರವಾಗಿ ಬಂಧಿಸಿ ನಂತರ ವೈಯಕ್ತಿಕ ಬಾಂಡ್ ನ ಮೇಲೆ ಡುಗಡೆ ಮಾಡಿದರು ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ  ಹಳ್ಳಿಯ ಬಳಿ ೧೫ ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರ ಎಸಗಲಾದ ಯುವತಿ ಮಂಗಳವಾರ ದೆಹಲಿಯ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ನಂತರ ದಲಿತ ಮಹಿಳೆಯ ಕುಟುಂಬವನ್ನು ಭೇಟಿಯಾಗಲು ಪಕ್ಷದ ಕಾರ್ಯಕರ್ತರು ಹತ್ರಾಸ್‌ಗೆ ತೆರಳುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com