ಅನ್ ಲಾಕ್-5: ಪುದುಚೇರಿಯಲ್ಲಿ ಚಿತ್ರಮಂದಿರ, ಶಾಲೆ ಆರಂಭ

ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿರುವ ಅನ್ ಲಾಕ್-7 ಮಾರ್ಗಸೂಚಿಯಡಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಶಾಲೆಗಳು, ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುದುಚೇರಿ: ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿರುವ ಅನ್ ಲಾಕ್-7 ಮಾರ್ಗಸೂಚಿಯಡಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಶಾಲೆಗಳು, ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಕಂಟೈನ್ ಮೆಂಟ್ ಜೋನ್ ನಲ್ಲಿ ಅಕ್ಟೋಬರ್ 31ರ ವರೆಗೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಪುದುಚೇರಿ ಜಿಲ್ಲಾಧಿಕಾರಿ ಟಿ ಅರುಣ್ ಅವರು ತಿಳಿಸಿದ್ದಾರೆ.

ನಿನ್ನೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನ್ ಲಾಕ್-5 ಮಾರ್ಗಸೂಚಿಗಳು ಇಂದಿನಿಂದಲೇ ಜಾರಿಗೆ ಬರಲಿದ್ದು, ಅದು ತಿಂಳಾಂತ್ಯದ ವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಅಕ್ಟೋಬರ್ 15 ರಿಂದ ಕಂಟೈನ್ ಮೆಂಟ್ ಜೋನ್ ನಿಂದ ಹೊರಗಿರುವ ಶಾಲೆ ಮತ್ತು ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು ತಮ್ಮ ಆಸನ ಸಾಮರ್ಥ್ಯದ ಶೇ. 50 ರಷ್ಟು ಮೀರದಂತೆ ನೋಡಿಕೊಳ್ಳಬೇಕು ಎಂದು ಅರುಣ್ ತಿಳಿಸಿದ್ದಾರೆ.

ಶಾಲೆಗಳನ್ನು ಹಂತ ಹಂತವಾಗಿ ಆರಂಭಿಸಲಾಗುತ್ತಿದ್ದು, ಅಕ್ಟೋಬರ್ 5 ರಿಂದ 10 ಮತ್ತು 12 ತರಗತಿ ಆರಂಭವಾದರೆ, ಅಕ್ಟೋಬರ್ 12ರಿಂದ 9 ಮತ್ತು 11ನೇ ತರಗತಿ ಆರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com