ಉತ್ತರ ಪ್ರದೇಶ: ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾರನ್ನು ವಶಕ್ಕೆ ಪಡೆದ ಪೊಲೀಸರು

ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಗ್ರೇಟರ್ ನೋಯ್ಡಾದಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಬಳಿಕ ಸಂತ್ರಸ್ಥ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಲ್ನಡಿಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, "ಕಳೆದ ವರ್ಷ ಇದೇ ಸಮಯದಲ್ಲಿ ನಾವು ಉನ್ನಾವೊ ಮಗಳಿಗಾಗಿ ಹೋರಾಡುತ್ತಿದ್ದೆವು. ಒಂದು ವರ್ಷದಲ್ಲಿ ಯುಪಿಯ ಪರಿಸ್ಥಿತಿ ಬದಲಾಗಿಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com