ಡೊನಾಲ್ಡ್ ಟ್ರಂಪ್, ಮೆಲಾನಿಯಾ ಟ್ರಂಪ್'ಗೆ ಕೊರೋನಾ ದೃಢ: ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಿ ಮೋದಿ ಶುಭ ಹಾರೈಕೆ

ಕೊರೋನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭ ಹಾರೈಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಕೊರೋನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭ ಹಾರೈಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ನನ್ನ ಸ್ನೇಹಿತರಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಹಾಗೂ ಆರೋಗ್ಯಕವಾಗಿರಲಿ ಎಂದು ಹಾರೈಸಿದ್ದಾರೆ. 

ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಈ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. 

ಈ ಹಿನ್ನೆಲೆಯಲ್ಲಿ ಟ್ರಂಪ್ ಹಾಗೂ ಅವರ ಪತ್ನಿ ಇಬ್ಬರೂ ಕೊರೋನಾ ಪರೀಕ್ಷೆಗೊಳಗಾಗಿದ್ದರು. ಇದೀಗ ಇಬ್ಬರಿಗೂ ಕೊರೋನಾ ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com