ಕಾಶ್ಮೀರ: ಯುವ ಘಟಕ ವಿಸರ್ಜಿಸಿದ ನ್ಯಾಷನಲ್ ಕಾನ್ಫರೆನ್ಸ್

ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.
ಎನ್ ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ
ಎನ್ ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ
Updated on: 

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.

"ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ನ ಯುವ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ" ಎಂದು ಎನ್‌ಸಿ ವಕ್ತಾರರು ತಿಳಿಸಿದ್ದಾರೆ. ಆದರೆ ಪಕ್ಷದ ಈ ನಿರ್ಧಾರಕ್ಕೆ ಅವರು ಯಾವುದೇ ಕಾರಣವನ್ನು ನೀಡಲಿಲ್ಲ.

ಆದಾಗ್ಯೂ, ಎನ್‌ಸಿ ಪಕ್ಷದ ಯುವ ಘಟಕಕ್ಕೆ ಹೊಸಬರನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com