ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್

ಹತ್ರಾಸ್: ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಆ ಕುಟುಂಬಕ್ಕೆ ವೈ ಶ್ರೇಣಿಯ ಭದ್ರತೆ ನೀಡದಿದ್ದಲ್ಲಿ ಇಲ್ಲಿ ಅವರಿಗೆ ಸುರಕ್ಷತೆ ಇಲ್ಲದಿರುವುದರಿಂದ ತಮ್ಮ ಮನೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿದರು.

ನಟಿ ಕಂಗನಾ ರಣಾವತ್ ಗೆ ವೈ ಶ್ರೇಣಿ ನೀಡುವುದಾದರೆ ಹತ್ರಾಸ್  ಸಂತ್ರಸ್ತೆಯ ಕುಟುಂಬಕ್ಕೆ  ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com