2019 ರ ಅಳ್ವಾರ್ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ಕಠಿಣ ಜೀವಾವಧಿ ಶಿಕ್ಷೆ

ರಾಜಸ್ಥಾನದಲ್ಲಿ  2019 ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ನಾಲ್ವರಿಗೆ ಮಂಗಳವಾರ ಅಳ್ವಾರ್ ಸ್ಥಳೀಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ
2019 ರ ಅಳ್ವಾರ್ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ಕಠಿಣ ಜೀವಾವಧಿ ಶಿಕ್ಷೆ
Updated on: 

ಜೈಪುರ್: ರಾಜಸ್ಥಾನದಲ್ಲಿ  2019 ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ನಾಲ್ವರಿಗೆ ಮಂಗಳವಾರ ಅಳ್ವಾರ್ ಸ್ಥಳೀಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ

ಇದೇ ಪ್ರಕರಣದಲ್ಲಿ ಘಟನೆಯ ವಿಡಿಯೋ ತುಣುಕನ್ನು ಚಿತ್ರೀಕರಿಸಿದ ಮತ್ತು ಪ್ರಸಾರ ಮಾಡಿದ್ದಕ್ಕಾಗಿ ಐಟಿ ಕಾಯ್ದೆಯಡಿ ಒಬ್ಬ ಅಪರಾಧಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತು.

ಕಳೆದ ವರ್ಷ ಏಪ್ರಿಲ್ 26 ರಂದು ತಾನಗಾಜಿ ಅಳ್ವಾರ್ ಬೈಪಾಸ್‌ನ ಖಾಲಿ ನಿವೇಶನದಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪತಿಯ ಸಮ್ಮುಖದಲ್ಲೇ ನಾಲ್ವರು ಸೇರಿ ಸಾಮೂಹಿಕ ಅತ್ಯಾಚರ ಮಾಡಿದ್ದರು.

ಹನ್ಸ್‌ರಾಜ್ ಗುರ್ಜರ್, ಅಶೋಕ್ ಗುಜರ್, ಛೋಟೇಲಾಲ್ ಗುರ್ಜರ್ ಮತ್ತು ಇಂದ್ರಜ್ ಗುರ್ಜರ್ ಅವರುಗಳಿಗೆ ನ್ಯಾಯಾಲಯ ಕಠಿಣ  ಜೀವಾವಧಿ ಶಿಕ್ಷೆವಿಧಿಸಿದೆ.

ಇವರಲ್ಲಿ ಹನ್ಸ್‌ರಾಜ್ ಸಾಯುವವರೆಗೂ ಶಿಕ್ಷೆ ಅನುಭವಿಸಲಿದ್ದಾರೆ. ಏಕೆಂದರೆ ಅವರು ಪುನರಾವರ್ತಿತವಾಗಿ ಅಪರಾಧ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ಪರ ವಕೀಲರು ಸುದ್ದಿಗಾರರಿಗೆ ಹೇಳಿದರು.

ನ್ಯಾಯಾಲಯವು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಿಗಳಿಗೆ ದಂಡ ವಿಧಿಸಿದ್ದು, ಸಂತ್ರಸ್ತರಿಗೆ ಆ ದಂಡದ ಮೊತ್ತ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com