ಅಶ್ವನಿ ಕುಮಾರ್
ದೇಶ
ಸಿಬಿಐ ಮಾಜಿ ನಿರ್ದೇಶಕ, ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣು!
ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಿಮ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿ ಮೋಹಿತ್ ಚಾವ್ಲಾ ಸ್ಪಷ್ಟಪಡಿಸಿದ್ದಾರೆ.
ಅಶ್ವನಿ ಕುಮಾರ್ ಆಗಸ್ಟ್ 2006ರಿಂದ ಜುಲೈ 2008ರವರೆಗೆ ಹಿಮಾಚಲ ಪ್ರದೇಶದಲ್ಲಿ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 2008ರಿಂದ 2010ರವರೆಗೆ ಸಿಬಿಐ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಸದ್ಯ ಅಶ್ವನಿ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಶ್ವನಿ ಅವರು 2013ರಿಂದ 2014ರವರೆಗೆ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ