

ಕೊಚ್ಚಿ: ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಇಂದು 9,347 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 9,347 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,89,202ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 8,924 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಸೋಂಕಿತರ ಪೈಕಿ 96,316 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,91,798 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಇಂದು ಒಂದೇ ದಿನ 25 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಈ ವರೆಗೂ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,003ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಪತ್ತೆಯಾದ 9,347 ಸೋಂಕಿತರ ಪೈಕಿ 8,216 ಮಂದಿಯ ಸೋಂಕಿನ ಹಿನ್ನಲೆ ಪತ್ತೆಯಾಗಿದ್ದು, ಬಾಕಿ 821 ಮಂದಿಗೆ ಸೋಂಕು ತಗುಲಿತು ಎಂಬುದು ಪತ್ತೆಯಾಗಿಲ್ಲ. ಕೇರಳದಲ್ಲಿ ಇಂದು ಒಟ್ಟು 61,629 ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.