ಶ್ರೀನಗರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಸೋಮವಾರ ಬೆಳಿಗ್ಗೆ ಅಪ್‌ಟೌನ್ ಶ್ರೀನಗರದ ಬಾರ್ಜುಲ್ಲಾದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆದರೆ, ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಪರಸ್ಪರ ಗುಂಡಿನಚಕಮಕಿ ನಡೆದಿದೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com