ವಿಜಯರಾಜೇ ಸಿಂಧ್ಯಾ ಜನ್ಮಶತಮಾನೋತ್ಸವ: ರೂ.100ರ ವಿಶೇಷ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯ ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯ ಬಿಡುಗಡೆ ಮಾಡಿದ್ದಾರೆ.

ವಿಜಯರಾಜೇ ಸಿಂಧ್ಯಾ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜಮಾತೆ ಸಿಂಧ್ಯಾ ಅವರು ತಮ್ಮ ಜೀವನವನ್ನು ಜನರಿಗಾಗಿ ಅರ್ಪಿಸಿದರು. ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿರುವುದರಿಂದ ದೇಶವು ರಾಜಮಾತೆ ಸಿಂಧ್ಯಾ ಅವರ ಮಹಿಳಾ ಸಬಲೀಕರಣದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ ಎಂದರು.

ಸಮಾರಂಭದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು 100 ರೂಪಾಯಿ ನಾಣ್ಯ ಬಿಡುಗಡೆ ಮಾಡಿದ್ದು, ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದೆ.

ಧೀಮಂತ ನಾಯಕಿಗೆ ಗೌರವ ಸಲ್ಲಿಸಿದ ಮೋದಿ, ರಾಜಮಾತಾ ಸಿಂಧಿಯಾ ಅವರ ಜೀವನ ಮತ್ತು ಕಾರ್ಯ  ಸದಾ ಬಡವರ ಆಕಾಂಕ್ಷೆಗಳೊಂದಿಗೆ ಬೆಸೆದುಕೊಂಡಿತ್ತು ಮತ್ತು ಅವರ ಜೀವನವು ಜನಸೇವಗೆ ಮೀಸಲಾಗಿತ್ತು. ಕಳೆದ ಶತಮಾನದಲ್ಲಿ ಭಾರತಕ್ಕೆ ನಿರ್ದೇಶನ ನೀಡಿದ ಮತ್ತು ಭಾರತೀಯ ರಾಜಕಾರಣದ ಪ್ರತಿಯೊಂದು ಪ್ರಮುಖ ಹಂತಕ್ಕೂ ಸಾಕ್ಷಿಯಾದ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೇಳಿದ್ದಾರೆ. 

“ರಾಜಮಾತಾ ಸಿಂಧಿಯಾ ಅವರು ರಾಷ್ಟ್ರದ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ದೇಶದ ಭವಿಷ್ಯದ ಪೀಳಿಗೆಗೆ ತನ್ನ ಎಲ್ಲ ಸಂತೋಷವನ್ನು ತ್ಯಜಿಸಿದರು.  ಅವರ ಜೀವನವು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವದ ಮನೋಧರ್ಮವು ಜೀವನ ಇತರರಿಗೆ ಸೇವೆ ಸಲ್ಲಿಸಲು ಇರುತ್ತದೆ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಪ್ರಗತಿಪರ ಸುಧಾರಣೆಗಳು ಮತ್ತು ಬೆಳವಣಿಗೆಗನ್ನು ವಿವರಿಸಿದ ಮೋದಿ, ಇಂದು ಇರುತ್ತಿದ್ದರೆ ಈ ಸಕಾರಾತ್ಮಕ ಬದಲಾವಣೆಗಳನ್ನು ನೋಡಿ ರಾಜಮಾತಾ ಸಿಂಧಿಯಾ ಸಂತೋಷಪಡುತ್ತಿದ್ದರು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com