
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಲಹೆಗಾರ (ಪಿಎ) ರಾಜಿಂದರ್ ಕುಮಾರ್ ಅವರಿಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಡಿಐಜಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಯೊಂದರಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು , ಈ ಸಮಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಸುನಿಲ್ ವರ್ಮಾ ಅವರು ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ರಾಘವೇಂದ್ರ ವತ್ಸ ಅವರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಪೊಲೀಸ್ ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಕ್ಟೋಬರ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಡಿಐಜಿಗೆ ಸಮನ್ಸ್ ನೀಡಿದೆ.
"ಸತ್ಯ ಶೋಧನೆಗಾಗಿ ವಿಚಾರಣೆ ಪ್ರಾರಂಭಿಸಲಾಗಿದೆ"ಕೇಂದ್ರ ತನಿಖಾ ದಳ (ಸಿಬಿಐ) ವಕ್ತಾರ ಆರ್ ಕೆ ಗೌರ್ ಹೇಳಿದ್ದಾರೆ. ದುರ್ವರ್ತನೆ, ಕೆಲಸದ ಕುರಿತ ಅಸಭ್ಯ ವರ್ತನೆ , ಕಚೇರಿಯಿಂದ ಗೈರುಹಾಜರಿ ಮುಂತಾದ ಆರೋಪಗಳನ್ನು ಡಿಐಜಿ ವತ್ಸಾ ಅಕ್ಟೋಬರ್ 8 ರಂದುವರ್ಮಾ ವಿರುದ್ಧ ಆರೋಪಿಸಿ ತಮ್ಮ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಮರುದಿನ, ವರ್ಮಾ ಡಿಐಜಿಯ ಕಚೇರಿಗೆ ಬಂದಾಗ ಅಲ್ಲಿ ಅವರು ವತ್ಸ ಅವರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆಂದು ಆರೋಪಿಸಲಾಗಿದೆ ಮತ್ತು ಅವರನ್ನು ಅಲ್ಲಿದ್ದ ಇತರ ಅಧಿಕಾರಿಗಳು ಕರೆದೊಯ್ದರು ಎಂದು ಅವರು ಹೇಳಿದರು.
ಲೋಧಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ವರ್ಮಾ ಅವರು ಘಟನೆಯ ಸಂಪೂರ್ಣ ವಿವರಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 9 ರಂದು ಬೆಳಿಗ್ಗೆ 10.30 ರ ಸುಮಾರಿಗೆ ಭ್ರಷ್ಟಾಚಾರ ನಿಗ್ರಹ ಶಾಖೆಯ ಡಿಐಜಿ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿ ಅಧಿಕಾರಿ ಮುಖಕ್ಕೆ ಕಪಾಳ ಮೋಕ್ಷ ಮಾಡಿದ್ದು ನಂತರ ಮಾತನಾಡಲು ಹೇಳಿದ್ದಾಗಿ ಸಾರ್ವಜನಿಕ ಅಭಿಯೋಜಕ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಆಪ್ತ ಗಿ ಕಾರ್ಯದರ್ಶಿ ಕುಮಾರ್ ವಿರುದ್ಧ ಆರೋಪಗಳನ್ನು ರೂಪಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಡಿಐಜಿ ಅವರಿಗೆ ಈ ರೀತಿ ಮಾಡಿದ್ದಾರೆ ಎಂದು ವರ್ಮಾ ಹೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಏಜೆನ್ಸಿ ಕುಮಾರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು.
Advertisement