ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ 15 ವರ್ಷ ಜೈಲು ಶಿಕ್ಷೆ

ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Published on

ಬಾಂಡಾ: ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಈ ಇಬ್ಬರು ಪಾಪಿಗಳಿಗೆ ಪೊಕ್ಸೊ ಕಾಯ್ದೆ ಅಡಿ 15 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಿದೆ ಎಂದು ಸರ್ಕಾರಿ ಅಭಿಯೋಜಕ ರಾಮ್ ಸುಫರ್ ಸಿಂಗ್ ಅವರು ತಿಳಿಸಿದ್ದಾರೆ.

ಚೈಲ್ಡ್ ಲೈನ್ ಸಂಯೋಜಕರು ಮಾರ್ಚ್ 14, 2016ರಲ್ಲಿ ಪೈಲಾನಿ ಪೊಲೀಸ್ ಠಾಣೆಯಲ್ಲಿ ಬಾಲಕಿ ತಂದೆ ಹಾಗೂ ಆತನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ್ದರು ಎಂದು ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com