
ಪಾಟ್ನ: ಜೆಡಿಯು ಪಕ್ಷದ ಹಿರಿಯ ನಾಯಕ ಹಾಗೂ ಬಿಹಾರ ಪಂಚಾಯತ್ ರಾಜ್ ಸಚಿವ ಕಪಿಲ್ ಡಿಯೋ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ಕೊರೋನಾ ಸೋಂಕಿನಿಂದಾಗಿ ಕಪಿಲ್ ಡಿಯೋ ಅವರು ಪಾಟ್ನಾದ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಕಪಿಲ್ ಡಿಯೋ ಅವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಕಪಿಲ್ ಡಿಯೋ ಅವರು ನುರಿತ ಆಡಳಿತಾಗಾರ ಮತ್ತು ಜನಪ್ರಿಯ ರಾಜಕಾರಣಿಯಾಗಿದ್ದರು. ಅವರ ಸಾವು ಸಾಕಷ್ಟು ದುಃಖವನ್ನು ತಂದಿದೆ. ಕಪಿಲ್ ಅವರ ಸಾವು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತುಂಬಲಾರದ ನಷ್ಟವನ್ನುಂಟು ಮಾಡಿದ ಎಂದು ತಿಳಿಸಿದ್ದಾರೆ.
Advertisement