ಪೊಲೀಸ್ ಪೇದೆ ಮೇಲೆ ಹಲ್ಲೆ: ಮಹಾರಾಷ್ಟ್ರ ಸಚಿವೆಗೆ 3 ತಿಂಗಳು ಕಠಿಣ ಜೈಲು ಶಿಕ್ಷೆ

ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಅವರಿಗೆ ನ್ಯಾಯಾಲಯ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಯಶೋಮತಿ ಠಾಕೂರ್
ಯಶೋಮತಿ ಠಾಕೂರ್

ಮುಂಬೈ: ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಅವರಿಗೆ ನ್ಯಾಯಾಲಯ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಹೌದು... ಎಂಟು ವರ್ಷಗಳ ಹಿಂದೆ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಅವರಿಗೆ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಕಾಂಗ್ರೆಸ್‌ ಶಾಸಕಿಯಾಗಿರುವ ಠಾಕೂರ್‌,  ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷೆಯೂ ಆಗಿದ್ದಾರೆ. ಉದ್ಧವ್ ಠಾಕ್ರೆ ಅವರ ಮೈತ್ರಿ ಸರ್ಕಾರದಲ್ಲಿ ಅವರು ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿದ್ದು, ನ್ಯಾಯಾಲಯದ ತೀರ್ಪು ಇದೀಗ ಮೈತ್ರಿ ಸರ್ಕಾರಕ್ಕೆ ತೀವ್ರ ಮುಂಜುಗರವನ್ನುಂಟು ಮಾಡಿದೆ.

ಏನಿದು ಘಟನೆ?
2012ರ ಮಾರ್ಚ್ 24ರ ಸಂಜೆ 4.15ರ ವೇಳೆಯಲ್ಲಿ ಅಮರಾವತಿ ಜಿಲ್ಲೆಯ ರಾಜಾಪೇಠ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಂಬಾದೇವಿ ದೇವಸ್ಥಾನದ ಸಮೀಪ 2012ರ ಮಾರ್ಚ್‌ 24ರಂದು ಸಂಜೆ 4.15ರ ವೇಳೆಗೆ ಠಾಕೂರ್‌ ಹಾಗೂ ಅವರ ಬೆಂಬಲಿಗರು ಕರ್ತವ್ಯದಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಉಲ್ಲಾಸ್‌  ರೊರಳೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪವಿತ್ತು. ಏಕಮುಖ ರಸ್ತೆಯಲ್ಲಿ ವಿರುದ್ಧವಾಗಿ ಸಂಚರಿಸದಂತೆ ಠಾಕೂರ್‌ ಅವರಿದ್ದ ಕಾರನ್ನು ಕಾನ್‌ಸ್ಟೆಬಲ್‌ ತಡೆದಿದ್ದರು. ಈ ಸಂದರ್ಭದಲ್ಲಿ ಕಾರಿನಿಂದ ಇಳಿದಿದ್ದ ಯಶೋಮತಿ ಆಕ್ರೋಶಗೊಂಡು ಪೇದೆ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ನ್ಯಾಯಾಲಯದ  ಮೆಟ್ಟಿಲು ಕೂಡ ಏರಿತ್ತು. ಪ್ರಕರಣದ ವಿಚಾರಣೆ ನಡೆಸಿದ ಅಮರಾವತಿ ಜಿಲ್ಲಾ ನ್ಯಾಯಾಧೀಶರಾದ ಉರ್ಮಿಳಾ ಜೋಶಿ ಅವರು ಠಾಕೂರ್‌ ಸೇರಿದಂತೆ ಅವರ ಚಾಲಕ ಸಾಗರ್‌ ಸುರೇಶ್‌ ಖಂಡೇಕರ್‌ ಹಾಗೂ ಬೆಂಬಲಿಗರಾದ ಶರದ್‌ ಕಾಶಿರಾವ್‌ ಜವಾನ್‌ಲಾಲ್‌ ಹಾಗೂ ರಾಜು ಕಿಸಾನ್‌ ಇನ್‌ಗಲ್‌ ಅವರಿಗೆ ಮೂರು  ತಿಂಗಳು ಜೈಲು ಶಿಕ್ಷೆ ವಿಧಿಸಿ, ತಲಾ 15,500 ರೂ. ದಂಡ ವಿಧಿಸದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಯಶೋಮತಿ ಠಾಕೂರ್ ಅವರು, 'ನ್ಯಾಯಾಂಗವನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ನಾನು ವಕೀಲೆಯಾಗಿದ್ದು, ಈ ತೀರ್ಪಿನ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಈ ಕುರಿತು ಬೇರೇನೂ ಹೇಳುವುದಿಲ್ಲ. ಸತ್ಯ ಯಾವತ್ತೂ ಗೆಲ್ಲಲಿದೆ ಎಂದು  ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com