ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 62,212 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕೆ ಇಳಿಕೆ 

ದೇಶದಲ್ಲಿ ಒಂದೇ ದಿನ 62,212 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಒಂದೇ ದಿನ 62,212 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 62,212 ಜನರಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 74,32,681ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 837ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,12,998 ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಒಟ್ಟು 74,32,681 ಮಂದಿ ಸೋಂಕಿತರ ಪೈಕಿ ಈ ವರೆಗೂ 65,24,596 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾರತದಲ್ಲಿನ್ನೂ 7,95,087 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com