ಭಾರತದಲ್ಲಿ ಕೊರೋನಾ ಇಳಿಕೆ: 24 ಗಂಟೆಗಳಲ್ಲಿ 55,722 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 75 ಲಕ್ಷ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಿ ಇದೀಗ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,722 ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75 ಲಕ್ಷ ಗಡಿದಾಟಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಿ ಇದೀಗ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,722 ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75 ಲಕ್ಷ ಗಡಿದಾಟಿದೆ. 

ಇಷ್ಟೂ ದಿನ 1000ಕ್ಕಿಂತಲೂ ಹೆಚ್ಚು ದಾಖಲಾಗುತ್ತಿದ್ದ ಸಾವಿನ ಸಂಖ್ಯೆ ಕೂಡ ಇಳಿಮುಖವಾಗುತ್ತಿದೆ. ಒಂದೇ ದಿನ 579 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,14,610ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,50,273ರಷ್ಟಿದ್ದು, 75 ಲಕ್ಷ ಸೋಂಕಿತರ ಪೈಕಿ ಈ ವರೆಗೂ 66,63,608 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ ದೇಶದಲ್ಲಿ 7,72,055ರಷ್ಟು ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,59,786 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,50,83,976 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com