ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್, 30 ಲಕ್ಷ ಉದ್ಯೋಗಿಗಳಿಗೆ ದಸರಾ ಉಡುಗೊರೆ

ಕೇಂದ್ರ ಸರ್ಕಾರ ಬುಧವಾರ ತನ್ನ ನೌಕರರಿಗೆ 2019-2020ನೇ ಸಾಲಿನ ಬೋನಸ್ ಘೋಷಿಸಿದ್ದು, 30 ಲಕ್ಷ ಉದ್ಯೋಗಿಗಳು ಇದರ ಲಾಭ ಪಡೆಯಲಿದ್ದಾರೆ.
ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್

ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ತನ್ನ ನೌಕರರಿಗೆ 2019-2020ನೇ ಸಾಲಿನ ಬೋನಸ್ ಘೋಷಿಸಿದ್ದು, 30 ಲಕ್ಷ ಉದ್ಯೋಗಿಗಳು ಇದರ ಲಾಭ ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ ಸಿ ಮತ್ತು ಡಿ ದರ್ಜೆ ನೌಕರರಿಗೆ ಬೋನಸ್ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾವೇಡಕರ್ ಅವರು, ಬೋನಸ್ ನ ಒಟ್ಟು 3,737 ಕೋಟಿ ರೂಪಾಯಿ ಆಗಿದ್ದು, ಕನಿಷ್ಠ 30 ಲಕ್ಷ ನಾನ್ ಗೆಜೆಟೆಡ್ ಉದ್ಯೋಗಿಗಳಿಗೆ ಇದರಿಂದ ಅನುಕೂಲವಾಗಲಿದೆ. ವಿಜಯ ದಶಮಿಗೆ ಮುಂಚೆ ಒಂದೇ ಸಲಕ್ಕೆ ಈ ಬೋನಸ್ ಮೊತ್ತವನ್ನು ವಿತರಣೆ ಮಾಡಲಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಈ ಬೋನಸ್ ನೀಡುವ ಕ್ರಮದಿಂದ ದೇಶದ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆಂದು ಪ್ರಕಾಶ್ ಜಾವಡೇಕರ್ ನಿರೀಕ್ಷಿಸಿದ್ದಾರೆ. ಮುಂಬರುವ ಹಬ್ಬದ ಸೀಸನ್​ನಲ್ಲಿ ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com