ದೇಶ

ಇದೇನಾ ನಿಮ್ಮ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ?: ಬಿಜೆಪಿಯ ಉಚಿತ ಲಸಿಕೆ ಭರವಸೆಗೆ ರಾಹುಲ್ ಗಾಂಧಿ ಟೀಕೆ

ಇದೇನಾ ನಿಮ್ಮ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ?: ಬಿಜೆಪಿಯ ಉಚಿತ ಲಸಿಕೆ ಭರವಸೆಗೆ ರಾಹುಲ್ ಗಾಂಧಿ ಟೀಕೆ
ರಾಹುಲ್ ಗಾಂಧಿ
Published On :

ನವದೆಹಲಿ: ಮೂರು ಹಂತದ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಗುರುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಭರವಸೆ ನೀಡಿದೆ. ಬಿಜೆಪಿಯ ಈ ಭರವಸೆಯನ್ನು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ.

ಇದೇನಾ ನಿಮ್ಮ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ? ಕೇಂದ್ರ ಸರ್ಕಾರ ಈಗಷ್ಟೇ ತನ್ನ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ ಘೋಷಿಸಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ರಾಹುಲ್ ಗಾಂಧಿ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಸುಳ್ಳು ಭರವಸೆಗಳೊಂದಿಗೆ ನೀವು ಅದನ್ನು ಯಾವಾಗ ಪಡೆಯುತ್ತೀರಿ ಎಂದು ತಿಳಿಯಲು ದಯವಿಟ್ಟು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಉಲ್ಲೇಖಿಸಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗ್ಗೆ ಬಿಹಾರ ವಿಧಾನಸಭೆಗೆ ಬಿಜೆಪಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೋವಿಡ್-19 ಲಿಸಿಕೆಗೆ ಐಸಿಎಂಆರ್ ಅನುಮತಿ ನೀಡಿದ ತಕ್ಷಣ ಬಿಹಾರದ ಎಲ್ಲರಿಗೂ ಉಚಿತ ಲಸಿಕೆ ನೀಡುವ ಭರವಸೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.