ಅಮಿತ್ ಶಾಗೆ 56 ನೇ ವರ್ಷದ ಜನ್ಮ ದಿನ: ಶುಭ ಹಾರೈಸಿದ ಪ್ರಧಾನಿ ಮೋದಿ

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಇಂದು 56 ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅಮಿತ್ ಶಾ ಹುಟ್ಟುಹುಬ್ಬಕ್ಕೆ ಶುಭ ಹಾರೈಸಿದ್ದಾರೆ.
ಅಮಿತ್ ಶಾ, ಪ್ರಧಾನಿ ಮೋದಿ
ಅಮಿತ್ ಶಾ, ಪ್ರಧಾನಿ ಮೋದಿ
Updated on

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಇಂದು 56 ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅಮಿತ್ ಶಾ ಹುಟ್ಟುಹುಬ್ಬಕ್ಕೆ ಶುಭ ಹಾರೈಸಿದ್ದಾರೆ.

ದೇಶ ಪ್ರಗತಿ ಸಾಧಿಸುವತ್ತಾ ಅವರು ನೀಡುತ್ತಿರುವ ಸಮರ್ಪಣೆ ಮತ್ತು ದಕ್ಷತಾ ಮನೋಭಾವಕ್ಕೆ ನಮ್ಮ ರಾಷ್ಟ್ರ ಸಾಕ್ಷಿಯಾಗಿದೆ. ಬಿಜೆಪಿಯನ್ನು ಬಲಪಡಿಸುವ ಅವರ ಪ್ರಯತ್ನಗಳೂ ಗಮನಾರ್ಹವಾಗಿವೆ. ಅವರು ದೇಶ ಸೇವೆ ಮಾಡಲು ದೇವರು ಧೀರ್ಘ ಆಯಸ್ಸು ಮತ್ತು ಆರೋಗ್ಯಕೊಟ್ಟು ಆಶೀರ್ವದಿಸಲಿ ಎಂದು ಪ್ರಧಾನಿ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

1964ರಲ್ಲಿ ಮುಂಬೈನಲ್ಲಿ ಜನಿಸಿದ ಅಮಿತ್ ಶಾ, ಆರಂಭದಿಂದಲೂ ಆರ್ ಎಸ್ ಎಸ್ ನೊದಿಗೆ ತೊಡಗಿಸಿಕೊಂಡಿದ್ದು, ಗುಜರಾತಿನಲ್ಲಿ ಬಿಜೆಪಿ ಸರ್ಕಾರದ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2014ರಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾದ ನಂತರ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ಪಕ್ಷ ಜಯಭೇರಿ ಬಾರಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com