6 ವರ್ಷದ ಬಾಲಕಿಯನ್ನು ರೇಪ್ ಮಾಡಿ, ಸುಟ್ಟ ಕಿರತಕರು

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. 
ಅತ್ಯಾಚಾರ
ಅತ್ಯಾಚಾರ
Updated on

ಪಂಜಾಬ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. 

ಅರ್ಧ ಸುಟ್ಟುಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಇಬ್ಬರನ್ನೂ ಕೊಲೆ, ಅತ್ಯಾಚಾರದ ಆರೋಪದಡಿ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿ ವಲಸೆ ಕಾರ್ಮಿಕನ ಮಗಳಾಗಿದ್ದು,  ಗುರ್ ಪ್ರೀತ್ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಆಗಲೇ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ. ಆರೋಪಿಗಳ ಮನೆಯಲ್ಲೇ ಸಂತ್ರಸ್ತ ಬಾಲಕಿಯ ದೇಹ ಪತ್ತೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com