ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ.
ಟ್ವೀಟರ್ ನಲ್ಲಿ ಈ ಬಗ್ಗೆ ಸ್ವತ: ಫಢ್ನವೀಸ್ ಅವರೇ ಹೇಳಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಲಾಕ್ ಡೌನ್ ಆದಾಗಿನಿಂದಲೂ ಪ್ರತಿದಿನವೂ ಕೆಲಸ ಮಾಡುತ್ತಿದ್ದೇನೆ ಆದರೆ, ಈಗ ನಾನು ಸಲ್ಪ ಸಮಯದವರೆಗೂ ವಿರಾಮ ತೆಗೆದುಕೊಳ್ಳಲು ದೇವರು ಬಯಸಿದ್ದು, ನನಗೆ ಕೋವಿಡ್-19 ಪಾಸಿಟಿವ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಫಡ್ನವೀಸ್ ಬರೆದುಕೊಂಡಿದ್ದಾರೆ.
ಇತ್ತೀಚಿಗೆ ತಮ್ಮ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ, ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.
Advertisement