ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ದೊರೈಕಣ್ಣಾ ಸ್ಥಿತಿ ಗಂಭೀರ

ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಭಾನುವಾರ ತಿಳಿಸಿದೆ.
ದೊರೈಕಣ್ಣಾ
ದೊರೈಕಣ್ಣಾ
Updated on

ಚೆನ್ನೈ: ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಭಾನುವಾರ ತಿಳಿಸಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ಸಿಟಿ ಸ್ಕ್ಯಾನ್ ವರದಿಯಲ್ಲಿ ಅವರ ಸ್ವಾಶಕೋಶದಲ್ಲಿ ಶೇ.90ರಷ್ಟು ಸೋಂಕು ಇದೆ. ಅವರಿಗೆ ಇಸಿಎಂಒ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಕೃಷಿ ಸಚಿವರ ಆರೋಗ್ಯ ವಿಚಾರಿಸಿದರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದರು. ತಜ್ಞ ವೈದ್ಯರ ತಂಡ ಸಚಿವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com