ಅರ್ನಬ್‌ ವಿರುದ್ಧದ ಎಫ್ಐಆರ್‌ ರದ್ದತಿ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರದ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'

ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ಎರಡು ವಾರಗಳ ಕಾಲ ಮುಂದೂಡಿದೆ.
ಸುಪ್ರೀಂ ಕೋರ್ಟ್-ಅರ್ನಬ್ ಗೋಸ್ವಾಮಿ
ಸುಪ್ರೀಂ ಕೋರ್ಟ್-ಅರ್ನಬ್ ಗೋಸ್ವಾಮಿ

ನವದೆಹಲಿ: ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ಎರಡು ವಾರಗಳ ಕಾಲ ಮುಂದೂಡಿದೆ.

ಜೊತೆಗೆ, ಚಾನೆಲ್‌ ಮತ್ತು ಅದರ ಆ್ಯಂಕರ್‌ಗಳ ಮೇಲಿನ ಎಲ್ಲಾ ಪ್ರಕರಣಗಳ ವಿವರಗಳನ್ನೊಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ರಿಪಬ್ಲಿಕ್‌ ಟಿವಿಗೆ ನ್ಯಾಯಪೀಠ ಸೂಚಿಸಿದೆ.

ಗೋಸ್ವಾಮಿ ವಿರುದ್ಧ ಏಪ್ರಿಲ್‌ನಲ್ಲಿ ಮುಂಬೈನ ಬ್ಯಾಂಡ್ರಾದಲ್ಲಿ ವಲಸಿಕ ಕಾರ್ಮಿಕರ ಒಟ್ಟುಗೂಡುವಿಕೆಗೆ ಕೋಮು ಗಲಭೆಯ ಬಣ್ಣ ಹಚ್ಚಿದ ಆರೋಪ ಹೊರಿಸಲಾಗಿದೆ. ಜೊತೆಗೆ, ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com