2+2 ಮಾತುಕತೆಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಭಾರತಕ್ಕೆ ಆಗಮನ

ಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ಅವರು ತಮ್ಮ ಪತ್ನಿಯೊಂದಿಗೆ ಸೋಮವಾರ ದೆಹಲಿಗೆ ಆಗಮಿಸಿದ್ದಾರೆ.
ಭಾರತಕ್ಕೆ ಆಗಮಿಸಿದ ಮೈಕ್ ಪೋಂಪಿಯೋ ದಂಪತಿ
ಭಾರತಕ್ಕೆ ಆಗಮಿಸಿದ ಮೈಕ್ ಪೋಂಪಿಯೋ ದಂಪತಿ
Updated on

ನವದೆಹಲಿ: ಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ಅವರು ತಮ್ಮ ಪತ್ನಿಯೊಂದಿಗೆ ಸೋಮವಾರ ದೆಹಲಿಗೆ ಆಗಮಿಸಿದ್ದಾರೆ.

ಅಮೆರಿಕ- ಭಾರತದ ವಿದೇಶಾಂಗ ಹಾಗೂ ರಕ್ಷಣಾ ಸಚಿವರ ಮೂರನೇ ಮಹತ್ವದ ಮಾತುಕತೆ ಮಂಗಳವಾರ ದೆಹಲಿಯಲ್ಲಿ ನಡೆಯಲಿದ್ದು, ಇದಕ್ಕಾಗಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಪಾಂಪಿಯೋ ಅವರು ಇಂದು ದೆಹಲಿ ಆಗಮಿಸಿದ್ದಾರೆ.

2+2 ಮಾತುಕತೆಯಲ್ಲಿ ವಿಪಕ್ಷೀಯ ಸಂಬಂಧಗಳು ಮತ್ತು ಭದ್ರತಾ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಯಲಿದ್ದು, ಸಭೆಯಲ್ಲಿ ಅಮೆರಿಕ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಸಹ ಭಾಗವಹಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಇದು ಮೂರನೇ ಸಚಿವರ ಮಟ್ಟದ ಸಭೆಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ ಬಳಿಕ ಮೊದಲ ಸಭೆ 2018ರ ಸೆಪ್ಟೆಂಬರ್ನಲ್ಲಿ ದೆಹಲಿಯಲ್ಲಿ ಮೊದಲ  2+2 ಮಾತುಕತೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com