

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತಯಾಚನೆಯ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದೆ.
ತನ್ನ ದೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕ ಟ್ವೀಟ್ ಮೂಲಕ ಮಹಾಮೈತ್ರಿಗಾಗಿ ಮತಯಾಚಿಸಿದ್ದಾರೆ. ಮೊದಲ ಹಂತದ ಮತದಾನದ ಮತದಾರರಿಗೆ ಮನವಿ ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅವಧಿ ಪೂರ್ಣಗೊಂಡ ನಂತರ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಇದು ನೀತಿ ಸಂಹಿತಿಯ ಸಂಪೂರ್ಣ ಉಲ್ಲಂಘನೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Advertisement