ಬುದ್ಗಾಂನಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

ಬುದ್ಗಾಂನ ಅರಿಬಾಘ್ ಮೌಚ್ವಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 

ಇದರಂತೆ ಇಂದು ಬೆಳಿಗ್ಗೆ ಕೂಡ ಕಾರ್ಯಾಚರಣೆ ಮುಂದುವರೆದಿದ್ದು, ಈ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com