ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ವೈರಸ್ ಪಾಸಿಟಿವ್

ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.
ಸ್ಮೃತಿ ಇರಾನಿ
ಸ್ಮೃತಿ ಇರಾನಿ
Updated on

ನವದೆಹಲಿ: ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.

‘ಪ್ರಕಟಣೆ ನೀಡುವಾಗ ಪದಗಳನ್ನು ಹುಡುಕುವುದು ನನಗೆ ಅಪರೂಪವಾಗಿರುವುದರಿಂದ ಸರಳವಾಗಿ ಹೇಳುತ್ತಿದ್ದೇನೆ. ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ತಕ್ಷಣವೇ ಪರೀಕ್ಷೆಗೆ ಒಳಪಡಲು ವಿನಂತಿಸುತ್ತಿದ್ದೇನೆ.’ ಎಂದು ಸಚಿವೆ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಸಾಂಕ್ರಾಮಿಕ ವೈರಸ್‍ ತಗುಲಿದ ಅತಿಗಣ್ಯವ್ಯಕ್ತಿಗಳಲ್ಲಿ ಸ್ಮೃತಿ ಇರಾನಿ ಒಬ್ಬರಾಗಿದ್ದಾರೆ. ಈ ಹಿಂದೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಅನೇಕ ಸಚಿವರಿಗೆ ಮಾರಣಾಂತಿಕ ವೈರಸ್‌ ಸೋಂಕು ದೃಢಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com