ವಾಯು ಮಾಲಿನ್ಯ ತಡೆಗೆ ಕಠಿಣ ಕ್ರಮ: ನಿಯಮ ಉಲ್ಲಂಘಿಸಿದರೆ 1 ಕೋಟಿ ರೂ. ದಂಡ, 5 ವರ್ಷ ಜೈಲು ಶಿಕ್ಷೆ

ಮಲಿನಗೊಳಿಸುವುದನ್ನು ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಭಾರಿ ಮೊತ್ತದ ದಂಡ ಹಾಗೂ 5 ವರ್ಷದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. 
ದೆಹಲಿಯಲ್ಲಿ ವಾಯಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರು ಮುಖಕ್ಕೆ ಮಾಸ್ಕ್ ಧರಿಸಿರುವ ಚಿತ್ರ
ದೆಹಲಿಯಲ್ಲಿ ವಾಯಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರು ಮುಖಕ್ಕೆ ಮಾಸ್ಕ್ ಧರಿಸಿರುವ ಚಿತ್ರ

ನವದೆಹಲಿ: ಗಾಳಿಯನ್ನು ಮಲಿನಗೊಳಿಸುವುದನ್ನು ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಭಾರಿ ಮೊತ್ತದ ದಂಡ ಹಾಗೂ 5 ವರ್ಷದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. 

ರಾಷ್ಟ್ರಪತಿ ಅಂಕಿತದ ಬಳಿಕ ಸುಗ್ರೀವಾಜ್ಞೆ ಜಾರಿಗೆ ಬಂದಿದ್ದು, ಮಲಿನಗೊಳಿಸುವವರಿಗೆ 1 ಕೋಟಿ ರೂಪಾಯಿ ದಂಡ ಹಾಗೂ 5 ವರ್ಷಗಳ ಕಾಲ ಜೈಲು ಶಿಕ್ಷೆ ಸಿಗಲಿದೆ.

ಬೆಳೆ ತ್ಯಾಜ್ಯ ಸುಡುವುದರ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ "ಕೇಂದ್ರ ಸರ್ಕಾರ ದೆಹಲಿ-ಎನ್ ಸಿ ಆರ್ ವ್ಯಾಪ್ತಿಯಲ್ಲಿ ವಾಯು ಮಾಲಿನ್ಯ ತಡೆಗೆ ಕಠಿಣ ಕಾನೂನು ರೂಪಿಸಲಿದೆ ಎಂದು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದರು.

ಎನ್ ಸಿಆರ್ ನಲ್ಲಿ ವಾಯುಗುಣಮಟ್ಟ ನಿರ್ವಹಣೆಗಾಗಿ ಆಯೋಗ ಸ್ಥಾಪನೆಯಾಗಲಿದ್ದು, ದೆಹಲಿ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಭಾಗಗಳಲ್ಲಿ ಕಾರ್ಯನಿರ್ವಹಿಸಲಿವೆ. ಸುಗ್ರೀವಾಜ್ಞೆಯ ಕಾನೂನುಗಳನ್ನು ಪಾಲನೆ ಮಾಡದೇ ಇದ್ದಲ್ಲಿ ಆಯೋಗ ದೂರು ದಾಖಲಿಸಿಕೊಂಡು ದಂಡ ಹಾಗೂ ಶಿಕ್ಷೆಯನ್ನು ವಿಧಿಸುವ ಅಧಿಕಾರವನ್ನು ಹೊಂದಿರಲಿದೆ.

ಆಯೋಗಕ್ಕೆ ಅಧ್ಯಕ್ಷರನ್ನು ಪರಿಸರ ಖಾತೆ ಸಚಿವರು, ಸಾರಿಗೆ ಸಚಿವರು, ವಿಜ್ಞಾನ ಮತ್ತು ತಂತ್ರಜ್ಞಾನ, ವಾಣಿಜ್ಯ ಸಚಿವರು ಸಂಪುಟ ಕಾರ್ಯದರ್ಶಿಗಳ ಸಮಿತಿ ನೇಮಕ ಮಾಡಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com