ಪಾಕಿಸ್ತಾನ ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂಬುದು ಇಡೀ ಜಗತ್ತಿಗೇ ಗೊತ್ತು: ಭಾರತ

ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ ಮತ್ತು ಇದನ್ನು ತಳ್ಳಿಹಾಕಲು ಹಾಗೂ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಭಾರತ ಗುರುವಾರ ಹೇಳಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ನವದೆಹಲಿ: ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ ಮತ್ತು ಇದನ್ನು ತಳ್ಳಿಹಾಕಲು ಹಾಗೂ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಭಾರತ ಗುರುವಾರ ಹೇಳಿದೆ.

ಭಾರತ-ಅಮೆರಿಕ 2+2 ಮಾತುಕತೆಗೆ ಸಂಬಂಧಿಸಿದ ಜಂಟಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಪಾಕ್ ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಭಾರತ, "ವಿಶ್ವಸಂಸ್ಥೆ-ನಿಷೇಧಿತ ಅತಿ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರಿಗೆ" ಆಶ್ರಯ ನೀಡುವ ಪಾಕ್, ಬಲಿಪಶುವಿನ ನಾಟಕವಾಡಲು ಪ್ರಯತ್ನಿಸಬಾರದು ಎಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಭಾರತ-ಅಮೆರಿಕ ಜಂಟಿ ಹೇಳಿಕೆಗೆ ಸಂಬಂಧಿಸಿದ ಇಸ್ಲಾಮಾಬಾದ್‌ ಪ್ರತಿಕ್ರಿಯೆ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, "ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೆ ತಿಳಿದಿದೆ" ಎಂದರು.

"ಪಾಕ್ ನಾಯಕರು ಸಹ ಭಯೋತ್ಪಾದನೆಗೆ ಸಂಬಂಧಿಸಿದಂತೆ ತಮ್ಮ ಪಾತ್ರದ ಬಗ್ಗೆ ಮತ್ತೆ ಮಾತನಾಡಿದ್ದಾರೆ" ಎಂದು ಶ್ರೀವಾಸ್ತವ ಹೇಳಿದರು.

ಇದಕ್ಕು ಮುನ್ನ ಭಾರತದ ಗಡಿಯೊಳಗೆ ನುಗ್ಗಿ ಹೊಡೆದಿದ್ದೇವೆ. ಪುಲ್ವಾಮಾ ದಾಳಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಬಹು ದೊಡ್ಡ ಸಾಧನೆ ಎಂದು ಪಾಕ್ ಸಂಸತ್ತಿನಲ್ಲಿ ಸಚಿವ ಫವಾದ್ ಚೌಧರಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com