ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಹಿಂದೆ ಎಲ್‍ಇಟಿ ಕೈವಾಡ

ಕುಲ್ಗಾಮ್ ನಲ್ಲಿ ಕಳೆದ ರಾತ್ರಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯ ಹಿಂದೆ ಲಷ್ಕರ್ ಎ ತೊಯ್ಬಾ ಉಗ್ರರ ಕೈವಾಡವಿದೆಯೆಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.
ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಹಿಂದೆ ಎಲ್‍ಇಟಿ ಕೈವಾಡ
ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಹಿಂದೆ ಎಲ್‍ಇಟಿ ಕೈವಾಡ
Updated on: 

ಶ್ರೀನಗರ: ಕುಲ್ಗಾಮ್ ನಲ್ಲಿ ಕಳೆದ ರಾತ್ರಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯ ಹಿಂದೆ ಲಷ್ಕರ್ ಎ ತೊಯ್ಬಾ ಉಗ್ರರ ಕೈವಾಡವಿದೆಯೆಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ಉಗ್ರರು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್ ಇಟೂ ಮತ್ತು ಇನ್ನಿಬ್ಬರು ಕಾರ್ಯಕರ್ತರಾದ ಉಮರ್ ಹಜಾಮ್ ಮತ್ತು ಹರೂನ್ ರಶೀದ್ ಬೇಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಎಲ್ಇಟಿಯ ಛದ್ಮ ಸಂಘಟನೆಯಾಗಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ ಎಫ್)  ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.

ಹತ್ಯೆಗೆ ಬಳಕೆ ಮಾಡಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನದ ಆಣತಿಯಂತೆ ಈ ಹತ್ಯೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com