ಗೋವಾ ಸರ್ಕಾರದಿಂದ ಪಡಿತರ ಚೀಟಿ ಹೊಂದಿರುವವರಿಗೆ ಈರುಳ್ಳಿ, ಕೆ.ಜಿ.ಗೆ 32 ರೂ

ಈರುಳ್ಳಿ ಬೆಲೆ ಗಗನಕ್ಕೆ ಏರಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಇದೀಗ ಬಡವರ ನೆರವಿಗೆ ಧಾವಿಸಿದ ಗೋವಾ ಸರ್ಕಾರ ಪಡಿತರ ಚೀಟಿ ಹೊಂದಿರುವವರಿಗೆ ಕಡಿಮೆ ಬೆಲೆ ಈರುಳ್ಳಿ ನೀಡಲು ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಣಜಿ: ಈರುಳ್ಳಿ ಬೆಲೆ ಗಗನಕ್ಕೆ ಏರಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಇದೀಗ ಬಡವರ ನೆರವಿಗೆ ಧಾವಿಸಿದ ಗೋವಾ ಸರ್ಕಾರ ಪಡಿತರ ಚೀಟಿ ಹೊಂದಿರುವವರಿಗೆ ಕಡಿಮೆ ಬೆಲೆ ಈರುಳ್ಳಿ ನೀಡಲು ಮುಂದಾಗಿದೆ.

ಈ ಸಂಬಂಧ ಗೋವಾ ಸರ್ಕಾರ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಏಜೆನ್ಸಿಯಿಂದ 1,045 ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಿ 3.5 ಲಕ್ಷ ಪಡಿತರ ಚೀಟಿ ಹೊಂದಿರುವವರಿಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಪೂರೈಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸರಕುಗಳ ಬೆಲೆ ಗಣನೀಯವಾಗಿ ಹೆಚ್ಚಾದ ನಂತರ ಈರುಳ್ಳಿಯನ್ನು ಸಬ್ಸಿಡಿ ದರದಲ್ಲಿ ನೀಡುವ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಕಳೆದ ಬುಧವಾರ ಅನುಮೋದನೆ ನೀಡಿತ್ತು. ಈಗ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಕೆಜಿ. 32 ರೂ.ಗೆ ಈರುಳ್ಳಿ ನೀಡಲು ಸರ್ಕಾರ ನಿರ್ಧರಿಸಿದೆ.

"ಗೋವಾ ಸರ್ಕಾರ 1,045 ಮೆಟ್ರಿಕ್ ಟನ್ ಈರುಳ್ಳಿಯನ್ನು ನಾಸಿಕ್ ಮೂಲದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದಿಂದ (ನಾಫೆಡ್) ಖರೀದಿಸಿದೆ ಮತ್ತು ಪಡಿತರ ಚೀಟಿ ಹೊಂದಿರುವವರಿಗೆ ಈ ಈರುಳ್ಳಿ ನೀಡಲಾಗುವುದು" ಎಂದು ರಾಜ್ಯ ನಾಗರಿಕ ಸರಬರಾಜು ಇಲಾಖೆಯ ನಿರ್ದೇಶಕ ಸಿದ್ಧವಿನಾಯಕ್ ನಾಯಕ್ ಹೇಳಿದ್ದಾರೆ.

ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ತಲಾ 3 ಕೆ.ಜಿ ಈರುಳ್ಳಿಯನ್ನು ಕೆ.ಜಿ.ಗೆ 32 ರೂ.ಗೆ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com