8 ತಿಂಗಳ ನಂತರ ಕಡೆಗೂ ಜಾಮೀನು ಪಡೆದ ಡಾ. ಕಫೀಲ್ ಖಾನ್

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಡಾ. ಕಫೀಲ್ ಖಾನ್ ಗೆ ಅಲಹಾಬಾದ್ ಹೈಕೋರ್ಟ್ ಕಡೆಗೂ ಷರತ್ತು ಬದ್ಧ ಜಾಮೀನನ್ನು ಇಂದು ಮಂಜೂರು ಮಾಡಿದೆ.
ಡಾ. ಕಫೀಲ್ ಖಾನ್
ಡಾ. ಕಫೀಲ್ ಖಾನ್

ಉತ್ತರ ಪ್ರದೇಶ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಡಾ. ಕಫೀಲ್ ಖಾನ್ ಗೆ ಅಲಹಾಬಾದ್
 ಹೈಕೋರ್ಟ್ ಕಡೆಗೂ ಷರತ್ತು ಬದ್ಧ ಜಾಮೀನನ್ನು ಇಂದು ಮಂಜೂರು ಮಾಡಿದೆ.

ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಬಳಿ ನಡೆದ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರುದ್ಧದ ಪ್ರತಿಭಟನೆ ವೇಳೆಯಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಡಾ. ಕಫೀಲ್ ಖಾನ್ ಜೈಲು ಶಿಕ್ಷೆ ಅನುಭವಿಸುತ್ತಿದ್ದರು.

ಡಾ. ಕಫೀಲ್ ಖಾನ್ ಬಿಡುಗಡೆಗೆ ಸಂಬಂಧಿಸಿದ ಅರ್ಜಿಯನ್ನು 15 ದಿನಗಳೊಳಗೆ ಇತ್ಯರ್ಥಪಡಿಸಬೇಕೆಂದು ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಇಂದು ಜಾಮೀನು ಮಂಜೂರು ಮಾಡಲಾಗಿದೆ.

ಕಳೆದ ವರ್ಷ ಡಿಸೆಂಬರ್ 12 ರಂದು ಆಲಿಘರ್ ವಿಶ್ವವಿದ್ಯಾನಿಲಯದ ಬಳಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆ ವೇಳೆಯಲ್ಲಿ ಪ್ರಚೋದನಾಕಾರಿ ಆರೋಪದ ಮೇರೆಗೆ  ಜನವರಿಯಲ್ಲಿ ಮುಂಬೈಯಲ್ಲಿ ಉತ್ತರ ಪ್ರದೇಶ ಟಾಸ್ಕ್ ಫೋರ್ಸ್ ನಿಂದ ಡಾ. ಕಫೀಲ್ ಖಾನ್ ಅವರನ್ನು ಬಂಧಿಸಲಾಗಿತ್ತು. ನಂತರ ಫೆಬ್ರವರಿ 14ರಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com