ಡ್ರಗ್ಸ್ ದಂಧೆ: ಸುಶಾಂತ್ ಸಿಂಗ್ ರಜಪೂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ವಶಕ್ಕೆ ಪಡೆದ ಎನ್'ಸಿಬಿ

ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಮಾದಕ ದ್ರವ್ಯ ಘಟಕ ಅಧಿಕಾರಿಗಳು ಇದೀಗ ಸುಶಾಂತ್ ಸಿಂಗ್ ರಜಪೂತ್ ಹೌಸ್...
ಸ್ಯಾಮುಯೆಲ್ ಮಿರಾಂಡ ವಶಕ್ಕೆ ಪಡೆದ ಎನ್'ಸಿಬಿ
ಸ್ಯಾಮುಯೆಲ್ ಮಿರಾಂಡ ವಶಕ್ಕೆ ಪಡೆದ ಎನ್'ಸಿಬಿ
Updated on: 

ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಮಾದಕ ದ್ರವ್ಯ ಘಟಕ ಅಧಿಕಾರಿಗಳು ಇದೀಗ ಸುಶಾಂತ್ ಸಿಂಗ್ ರಜಪೂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 

ಪ್ರಕರಣ ಸಂಬಂಧ ಇಂದು ಮುಂಜಾನೆ ಎನ್'ಸಿಬಿ ಅಧಿಕಾರಿಗಳ ತಂಡ ಸುಶಾಂತ್ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಸ್ಯಾಮುಯೆಲ್ ಮಿರಾಂಡ ಮನೆಗೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಇದರಂತೆ ಇದೀಗ ಸ್ಯಾಮುಯೆಲ್ ಮಿರಾಂಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಪ್ರಸ್ತುತ ಲಭ್ಯವಾಗಿರುವ ವರದಿಗಳ ಪ್ರಕಾರ ಎನ್'ಸಿಬಿ ಅಧಿಕಾರಿಗಳು ಸ್ಯಾಮುಯೆಲ್ ಮಿರಾಂಡ ಹಾಗೂ ಶೋವಿಕ್ ಚಕ್ರವರ್ತಿಯವರ ಮನೆಗಳನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆನ್ನಲಾಗುತ್ತಿದೆ. 

ನಟ ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಆತನ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದೆ. ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯವೂ ಪ್ರಕರಣದ ತನಿಖೆ ನಡೆಸುತ್ತಿದೆ. ಮಾದಕ ದ್ರವ್ಯ ಪೂರೈಕೆ ಮತ್ತು ಸೇವನೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಎನ್ ಸಿಬಿಯೂ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com