ಮುಂಬೈ: ಡ್ರಗ್ಸ್ ಪೂರೈಕೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಇಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ .
ವೈದ್ಯಕೀಯ ಪರೀಕ್ಷೆ ನಂತರ ಸ್ಥಳೀಯ ನ್ಯಾಯಾಲಯವೊಂದರ ಬಳಿ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಪ್ರಮುಖ ಆರೋಪಿಯಾಗಿದ್ದಾರೆ. ಇಬ್ಬರನ್ನು ಸಾರ್ವಜಿಕ ಆಸ್ಪತ್ರೆ ಸಿಯೊನ್ ಆಸ್ಪತ್ರೆಯಲ್ಲಿ ಬೆಳಗ್ಗೆ 9-15ರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಲಯದ ಬಳಿ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಡ್ರಗ್ ಪೆಡ್ಲರ್ ಜೈದ್ ವಿಲಾತ್ರಾ,ಬಸಿತ್ ಪರಿಹಾರ್ ಅವರನ್ನು ಎನ್ ಸಿಬಿ ಈಗಾಗಲೇ ಬಂಧಿಸಲಾಗಿದ್ದು, ಪ್ರಸ್ತುತ ಅವರು ವಿಚಾರಣೆ ಎದುರಿಸುತ್ತಿದ್ದಾರೆ.
Advertisement