ರೇಪ್ ವಿಡಿಯೋ ಹರಿಬಿಟ್ಟ ಕಾಮುಕ; ಮನನೊಂದು ಆತ್ಮಹತ್ಯೆಗೆ ಶರಣಾದ ಸಂತ್ರಸ್ತ ಯುವತಿ!

ಕಾಮುಕನೊಬ್ಬ ಅತ್ಯಾಚಾರ ಎಸಗಿದ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರಿಂದ ಮನನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಲಖನೌ: ಕಾಮುಕನೊಬ್ಬ ಅತ್ಯಾಚಾರ ಎಸಗಿದ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರಿಂದ ಮನನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಉತ್ತರ ಪ್ರದೇಶದ ಶಹರಾನಪುರದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಯುವತಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿದ್ದಾನೆ. ಅಲ್ಲದೆ ಇದನ್ನು ತನ್ನ ಚಾಲಕನ ಕೈಯಲ್ಲಿ ವಿಡಿಯೋವನ್ನು ಮಾಡಿಸಿದ್ದಾನೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾನೆ. 

ಅತ್ಯಾಚಾರದಿಂದ ಮನನೊಂದಿದ್ದ ಸಂತ್ರಸ್ತ ಯುವತಿ ಕೊನೆಗೆ ತನ್ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ತಿಳಿದು ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. 

ಅತ್ಯಾಚಾರ ನಡೆಸಿದ್ದ ನೋಮನ್ ಮತ್ತು ನೋಮನ್ ಚಾಲಕ ರಹ್ಬರ್ ನಂತರ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ ತಾವು ಹೇಳಿದಂತೆ ಕೇಳಬೇಕು ಎಂದು ಹೇಳಿದ್ದರು. ಇದನ್ನು ನಿರಾಕರಿಸಿದ್ದರಿಂದ ದುರುಳರು ವಿಡಿಯೋವನ್ನು ಹರಿಬಿಟ್ಟಿದ್ದಾರೆ. 

ಈ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ), 306(ಅತ್ಯಾಚಾರಕ್ಕೆ ಪ್ರೇರಣೆ) ಸೇರಿದಂತೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com