ಜೆಡಿಯು,ಎಲ್ ಜೆಪಿ ನಡುವಣ ಒಡಕು: ಮಹತ್ವದ ಎಲ್ ಜೆಪಿ ಸಭೆ ಹಿನ್ನೆಲೆ, ನಿತೀಶ್ ವಿರುದ್ಧ ಚಿರಾಗ್ ವಾಗ್ದಾಳಿ

 ಆಡಳಿತರಾಢ ಎನ್ ಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಜೆಡಿಯು ಹಾಗೂ ಎಲ್ ಜೆಪಿ ನಡುವಣ ಒಡಕು ಮೂಡಿದ್ದು,ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಲೋಕ ಜನಶಕ್ತಿ ಪಕ್ಷ ಇಂದು ಮಹತ್ವದ ಸಭೆಯನ್ನು ನಡೆಸುತ್ತಿದೆ.
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್
Updated on: 

ಪಾಟ್ನಾ: ಆಡಳಿತರಾಢ ಎನ್ ಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಜೆಡಿಯು ಹಾಗೂ ಎಲ್ ಜೆಪಿ ನಡುವಣ ಒಡಕು ಮೂಡಿದ್ದು,
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಲೋಕ ಜನಶಕ್ತಿ ಪಕ್ಷ ಇಂದು ಮಹತ್ವದ ಸಭೆಯನ್ನು ನಡೆಸುತ್ತಿದೆ.

ಸಭೆಯ ಹಿನ್ನೆಲೆಯಲ್ಲಿ ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವನ್ , ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದವರಿಗೆ ಈ ಹಿಂದೆ ನೀಡಿದ ಭರವಸೆಯನ್ನು ನಿತೀಶ್ ಕುಮಾರ್ ಪೂರ್ಣಗೊಳಿಸಿಲ್ಲ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದು, ಒಂದು ವೇಳೆ ನಿತೀಶ್ ಕುಮಾರ್ ಸರ್ಕಾರ ಪ್ರಾಮಾಣಿಕವಾಗಿದ್ದರೆ 15 ವರ್ಷದ  ಆಡಳಿತಾವಧಿಯಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿ, ಪಂಗಡದ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಲಿ ಎಂದು ಎಲ್ ಜೆಪಿ ಅಧ್ಯಕ್ಷರು ಹೇಳಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ಮತ್ತು ಜೆಡಿಯು ನಡುವಣ ಕೆಲ ತಿಂಗಳುಗಳಿಂದ ಸಂಬಂಧ  ಹದಗೆಟ್ಟಿದ್ದು, ಅನೇಕ ವರ್ಷಗಳಿಂದ ಎಲ್ ಜೆಪಿಯನ್ನು ಗುರಿಯಾಗಿಸಿಕೊಟ್ಟು ಬಂದಿದ್ದ ಮಾಜಿ]ಮುಖ್ಯಮಂತ್ರಿ ಜಿತಿನ್ ರಾಮ್ ಮಾಂಝಿ ಜೊತೆಗೆ ಕುಮಾರ್ ಮತ್ತೆ ಕೈ ಜೋಡಿಸಲು ನಿರ್ಧರಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಚಿರಾಗ್ ಪಾಸ್ವಾನ್, ಇದೀಗ ಎಲ್ ಜೆಪಿ ಪಕ್ಷದ ಅಧ್ಯಕ್ಷರಾಗಿದ್ದು, ಎನ್ ಡಿಎ ಮೈತ್ರಿಕೂಟದ ಅಂಗಪಕ್ಷವಾಗಿದ್ದರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದೆ.

ಎಲ್ ಜೆಪಿಯೊಂದಿಗೆ ಯಾವುದೇ ಸೀಟು ಹೊಂದಾಣಿಕೆ ಮಾಡಿಕೊಳ್ಳವುದಿಲ್ಲ, ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾಗಿ
ಜೆಡಿಯು ಸ್ಪಷ್ಪಪಡಿಸಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಅಕ್ಟೋಬರ್ - ನವೆಂಬರ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com