ಶೇ.78ರ ಸಮೀಪಕ್ಕೆ ಕೊರೋನಾ ಗುಣಮುಖರ ಪ್ರಮಾಣ

ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಗುಣಮುಖ ಪ್ರಮಾಣ ಈಗ ಶೇ.8ರ ಸಮೀಪಕ್ಕೆ ಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಗುಣಮುಖ ಪ್ರಮಾಣ ಈಗ ಶೇ.8ರ ಸಮೀಪಕ್ಕೆ ಬಂದಿದೆ. 

ಒಂದೇ ದಿನ 69,564 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸೆ.7ರವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 32.5 ಲಕ್ಷಕ್ಕೆ ಏರಿಕೆಯಾಗಿ ಗುಣಮುಖ ಪ್ರಮಾಣ ಶೇ.77.31ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದೇ ವೇಳೆ, ಭಾನುವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 90,802 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಅವಧಿಯಲ್ಲಿ  1,016 ಸೋಂಕಿತರು ಅಸುನೀಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com