ಲಖನೌ: ಹುಟ್ಟುಹಬ್ಬದ ಪಾರ್ಟಿಗೆ ಗೆಳೆಯತಿಯನ್ನು ಕರೆಸಿಕೊಂಡಿದ್ದ ಗೆಳೆಯರು ಆಕೆಗೆ ಎಣ್ಣೆ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಯುವತಿ ಬ್ಯುಟಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದಳು.
ಯುವತಿಯನ್ನು ಗೆಳೆಯರು ಹುಟ್ಟುಹಬ್ಬದ ಪಾರ್ಟಿಗೆ ಕರೆಸಿಕೊಂಡಿದ್ದಾರೆ. ನಂತರ ಆಕೆಗೆ ಕಂಠಪೂರ್ತಿ ಎಣ್ಣೆ ಕುಡಿಸಿದ್ದಾರೆ. ಬಳಿಕ ಮತ್ತಿನಲ್ಲಿದ್ದ ಯುವತಿ ಮೇಲೆ ಗೆಳೆಯರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿ ಮಧ್ಯರಾತ್ರಿ ಧೂಮನ್ ಗಂಜ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ ಅಷ್ಟರಲ್ಲಿ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.
Advertisement