ಸಾಂದದರ್ಭಿಕ ಚಿತ್ರ
ದೇಶ
ಮಹಾರಾಷ್ಟ್ರದಲ್ಲಿ ಇಂದು ಕೊರೋನಾಗೆ 448 ಬಲಿ, 23,446 ಮಂದಿಗೆ ಪಾಸಿಟಿವ್
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಗುರುವಾರ ಒಂದೇ ದಿನ 23 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಗುರುವಾರ ಒಂದೇ ದಿನ 23 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಲ್ಲಿ ಇಂದು, 23,446 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,90,795ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾಮಾರಿಗೆ ಇಂದು 448 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 28,282ಕ್ಕೆ ಏರಿಕೆಯಾಗಿದೆ.
ಮುಂಬೈನಲ್ಲಿ 2371 ಹೊಸ ಪ್ರಕರಣಗಳು ಮತ್ತು 38 ಸಾವುಗಳು ವರದಿಯಾಗಿದ್ದು, ಇದರೊಂದಿಗೆ ವಾಣಿಜ್ಯ ನಗರಿಯ ಸೋಂಕಿತರ ಸಂಖ್ಯೆ 1,63,115 ಮತ್ತು ಸಾವಿನ ಸಂಖ್ಯೆ 8,023ಕ್ಕೆ ತಲುಪಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ