ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ  14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ  14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆದಾಯ ಕೊರತೆ ಎದುರಿಸುತ್ತಿರುವ  14 ರಾಜ್ಯಗಳಿಗೆ  ಹೆಚ್ಚುವರಿ ಸಂಪನ್ಮೂಲವಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

15 ನೇ ಹಣಕಾಸು ಆಯೋಗದ ಆರ್ಥಿಕ ಸಲಹಾ ಮಂಡಳಿಯು ಮುಂದಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020-21 ಮತ್ತು 2021-22ರ ಆರ್ಥಿಕ ವರ್ಷವನ್ನು ವಿಭಿನ್ನವಾಗಿ ಪರಿಗಣಿಸುವಂತೆ ಸೆಪ್ಟೆಂಬರ್ 5 ರಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com