ಮಹಾರಾಷ್ಟ್ರದಲ್ಲಿ 10 ಲಕ್ಷದ ಗಡಿ ದಾಟಿದ ಕೊರೋನಾ, ಶುಕ್ರವಾರ ದಾಖಲೆಯ 24,886 ಹೊಸ ಪ್ರಕರಣ

ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.
ಸಾಂದದರ್ಭಿಕ ಚಿತ್ರ
ಸಾಂದದರ್ಭಿಕ ಚಿತ್ರ
Updated on: 

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.

ಮಹಾರಾಷ್ಟ್ರದಲ್ಲಿ ಇಂದು ದಾಖಲೆಯ 24,886 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,15,681ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಮಾರಿಗೆ ಇಂದು 393 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 28,724ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ 2191 ಹೊಸ ಪ್ರಕರಣಗಳು ಮತ್ತು 44 ಸಾವುಗಳು ವರದಿಯಾಗಿದ್ದು, ಇದರೊಂದಿಗೆ ವಾಣಿಜ್ಯ ನಗರಿಯ ಸೋಂಕಿತರ ಸಂಖ್ಯೆ 1,65,306 ಮತ್ತು ಸಾವಿನ ಸಂಖ್ಯೆ 8,067ಕ್ಕೆ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com