ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ, ಶೇ.100 ರಷ್ಟು ಅಂಕ ಗಳಿಸಿದ 24 ಅಭ್ಯರ್ಥಿಗಳು

ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೇ ನಡೆದ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 24 ವಿದ್ಯಾರ್ಥಿಗಳು ಶೇ. 100 ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೇ ನಡೆದ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 24 ವಿದ್ಯಾರ್ಥಿಗಳು ಶೇ. 100 ರಷ್ಟು ಅಂಕಗಳನ್ನು ಗಳಿಸಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜೆಇಇ ಪರೀಕ್ಷೆ ಎರಡು ಬಾರಿ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದ 233 ನಗರಗಳ 660 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.

ಇಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 100 ರಷ್ಟು ಅಂಕ ಪಡೆದವರ ಪಟ್ಟಿಯಲ್ಲಿ ತೆಲಂಗಾಣ(8 ಅಭ್ಯರ್ಥಿಗಳು) ಮೊದಲ ಸ್ಥಾನದಲ್ಲಿರೆ, ದೆಹಲಿ(5) ಎರಡನೇ ಸ್ಥಾನದಲ್ಲಿದೆ. ನಂತರದಲ್ಲಿ ಸ್ಥಾನದಲ್ಲಿ ರಾಜಸ್ಥಾನ(4), ಆಂಧ್ರಪ್ರದೇಶ (3), ಹರಿಯಾಣ (2) ಮತ್ತು ಗುಜರಾತ್ ಹಾಗೂ ಮಹಾರಾಷ್ಟ್ರದ ತಲಾ ಒಬ್ಬ ಅಭ್ಯರ್ಥಿ ಶೇ. 100 ಅಂಕ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ತಾಣಗಳಾದ jeemain.nta.nic.in ಅಥವಾ jeemain.nic.in ನಲ್ಲಿ ಪರಿಶೀಲಿಸಬಹುದು. ಜೆಇಇ ಮುಖ್ಯ ಪರೀಕ್ಷೆಯ Provisional Answer Keyಯನ್ನು 8 ಸೆಪ್ಟೆಂಬರ್ 2020 ರಂದು ಬಿಡುಗಡೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com