

ನವದೆಹಲಿ: ದೇಶದಲ್ಲಿಂದು ಮಹಾಮಾರಿ ಕೊರೋನಾ ವೈರಸ್ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಇನ್ನು ನಿನ್ನೆ ಒಂದೇ ದಿನ ಹೆಮ್ಮಾರಿ ವೈರಸ್ 1,201 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 46,59,985 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟಾರೆ 36,24,197 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,58,316 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ.