ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on: 

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.

ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗೆ ಅಮೆರಿಕಕ್ಕೆ ತೆರಳಿದ್ದು, ಪುತ್ರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸೋನಿಯಾ ಅವರೊಂದಿಗೆ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೂಕ್ತ ಚಿಕಿತ್ಸೆ ಬಳಿಕ ಸೋನಿಯಾ-ರಾಹುಲ್ ಇಬ್ಬರೂ ಭಾರತಕ್ಕೆ ಮರಳಿ ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಸೋನಿಯಾ ಎರಡು ವಾರಗಳ ಕಾಲ ಅಮೆರಿಕದಲ್ಲೇ ಇರಲಿದ್ದು, ರಾಹುಲ್ ಕೇವಲ ಒಂದೇ ವಾರದಲ್ಲಿ ಮರಳಿ ಭಾರತಕ್ಕೆ ಬರಲಿದ್ದಾರೆ. ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳಲು ರಾಹುಲ್ ಬೇಗ ಮರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೊರೋನಾ ವೈರಸ್ ಹಾವಳಿಯಿಂದಾಗಿ ಸೋನಿಯಾ ಗಾಂಧಿ ಅವರ ನಿಯಮಿತ ಆರೋಗ್ಯ ತಪಾಸಣೆ ವಿಳಂಬವಾಗಿದ್ದು, ಇದೀಗ ಅಮೆರಿಕಕ್ಕೆ ತೆರಳಿ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com